ಮೇ.8: ಎಸ್ಸೆಸ್ಸೆಲ್ಸಿ 2024 ಪರೀಕ್ಷೆ- 1ರ ಫಲಿತಾಂಶ ಪ್ರಕಟ ಸಾಧ್ಯತೆ

 



ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಸೆಸ್ಸೆಲ್ಸಿ 2024 ಪರೀಕ್ಷೆ- 1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮೇ.8ರಂದು ಪ್ರಕಟಿಸುವ ಸಾಧ್ಯತೆ ಇದೆ.


ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಢೀಕರಣದ ಕಾರ್ಯ ಅಂತಿಮ ಹಂತದಲ್ಲಿದೆ. ಮೇ.8ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದ್ದು, ಕಂಪ್ಯೂಟರ್ ಗೆ ಸೇರ್ಪಡೆಗೊಳಿಸುವ ಕಾರ್ಯ ವಿಳಂಬವಾದರೆ ಫಲಿತಾಂಶ ಪ್ರಕಟಿಸುವ ದಿನಾಂಕ ಬದಲಾಗುವ ಸಾಧ್ಯತೆ ಇದೆ. ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ 

 ಮಂಡಳಿ ವೆಬ್‌ಸೈಟ್‌ನಲ್ಲಿ ನೋಡಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು.


ಈ ಬಾರಿ ಮೂರು ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಆ ಮೂರೂ ಪರೀಕ್ಷೆ ಬರೆದವರು ಹೆಚ್ಚು ಅಂಕಗಳು ಯಾವ ಪರೀಕ್ಷೆಯಲ್ಲಿ ಬಂದಿರುತ್ತದೋ ಆ ಫಲಿತಾಂಶವನ್ನು ಉಳಿಸಿಕೊಳ್ಳುವ ಅವಕಾಶ ದೊರೆಯಲಿದೆ. ಪ್ರತಿ ವಿದ್ಯಾರ್ಥಿಗಳು ಮೂರೂ ಪರೀಕ್ಷೆ ಬರೆಯುವುದು ಕಡ್ಡಾಯವಲ್ಲ. ಮೊದಲ ಅಥವಾ ವಾರ್ಷಿಕ ಪರೀಕ್ಷೆಯಲ್ಲಿ ಬಂದ ಫಲಿತಾಂಶದಲ್ಲಿ ಸಮಾಧಾನವಿದ್ದರೆ ಎರಡನೇ ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಸಮಾಧಾನ ಇಲ್ಲದಿದ್ದರೆ ಅಥವಾ ಕಡಿಮೆ ಅಂಕಗಳು ಬಂದಿದ್ದರೆ ಎರಡನೇ ಪರೀಕ್ಷೆ ಬರೆಯಬಹುದು. ಎರಡನೇ ಪರೀಕ್ಷೆಯ ಫಲಿತಾಂಶದಲ್ಲೂ ಸಮಾಧಾನ ಇಲ್ಲದಿದ್ದರೆ ಮೂರನೇ ಪರೀಕ್ಷೆ ಬರೆಯಬಹುದು. ಈ ರೀತಿ ಮೂರೂ ಪರೀಕ್ಷೆ ಬರೆದರೂ ಮೂರರಲ್ಲಿ ಯಾವ ಫಲಿತಾಂಶವನ್ನು ಬೇಕಾದರೂ ಅಥವಾ ಮೂರೂ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದಿರುವ ಬೇರೆ ಬೇರೆ ವಿಷಯಗಳ ಫಲಿತಾಂಶಗಳನ್ನು ಒಟ್ಟಾರೆ ಫಲಿತಾಂಶಕ್ಕೆ ಪರಿಗಣಿಸಬಹುದಾಗಿದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget