ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್ ಕಾಮತ್ ರವರು ಭಾಗಿ

 ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್ ಕಾಮತ್ ರವರು ಭಾಗವಹಿಸಿದರು.



ಸಿದ್ದಾಪುರ ಹೈಸ್ಕೂಲಿನಿಂದ ಆರಂಭವಾದ ಬೃಹತ್ ರೋಡ್ ಶೋ ಹಾಗೂ ಸರ್ಕಲ್ ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಬಿ.ವೈ ರಾಘವೇಂದ್ರ ರವರ ಪರ ಮತಯಾಚನೆ ನಡೆಸಿದ ಅವರು, ಇಲ್ಲಿ ನೆರೆದಿರುವ ಕಾರ್ಯಕರ್ತರ ಉತ್ಸಾಹ ನೋಡಿದರೆ ಈ ಬಾರಿಯೂ ಬಿಜೆಪಿ ಇಲ್ಲಿ ಸ್ಪಷ್ಟ ಮುನ್ನಡೆ ಸಾಧಿಸಿ ಪ್ರಚಂಡ ವಿಜಯಕ್ಕೆ ಮುನ್ನುಡಿ ಬರೆಯುವುದು ಶತಃಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.



ಶಾಸಕರುಗಳಾದ ಯಶ್ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ಕಿರಣ್ ಕೂಡ್ಗಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್, ದ ಕ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಅರುಣ್ ಕುಮಾರ್ ಪುತ್ತಿಲ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget